CM of Karnataka (@CMofKarnataka) header
CM of Karnataka (@CMofKarnataka) profile picture

Official Page of the Chief Minister's Office, Karnataka

Bengaluru, Karnataka
Joined August 2014
Photo by CM of Karnataka (@CMofKarnataka)Photo by CM of Karnataka (@CMofKarnataka)Photo by CM of Karnataka (@CMofKarnataka)Photo by CM of Karnataka (@CMofKarnataka)Photo by CM of Karnataka (@CMofKarnataka)Photo by CM of Karnataka (@CMofKarnataka)Photo by CM of Karnataka (@CMofKarnataka)Photo by CM of Karnataka (@CMofKarnataka)Photo by CM of Karnataka (@CMofKarnataka)Photo by CM of Karnataka (@CMofKarnataka)
ಕಲೆಗೆ ಗೃಹಲಕ್ಷ್ಮಿಯ ಪ್ರೋತ್ಸಾಹ – ಸ್ವಾವಲಂಬನೆಗೆ ಹೊಸ ಉತ್ಸಾಹ ಗೃಹಲಕ್ಷ್ಮಿ ಯೋಜನೆಯ ನೆರವು ಮಹಿಳೆಯರ ಬದುಕಿನಲ್ಲಿ ಎಂತಹ ಅರ್ಥಪೂರ್ಣ ಬದಲಾವಣೆ ತರಬಲ್ಲದು ಎಂಬುದಕ್ಕೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರನ್ನು ಭೇಟಿಯಾದ ಫಲಾನುಭವಿಯೊಬ್ಬರ ಅನುಭವವೇ ಹೃದಯಸ್ಪರ್ಶಿ ಉದಾಹರಣೆಯಾಯಿತು. ಯೋಜನೆಯಿಂದ ದೊರೆತ ಹಣವನ್ನು ತಮ್ಮಲ್ಲಿದ್ದ ಕಲೆಯನ್ನು ಬೆಳೆಸಲು ಬಳಸಿಕೊಂಡು, ಸುಂದರ ಕರಕುಶಲ ವಸ್ತುಗಳನ್ನು ತಯಾರಿಸುವ ಮೂಲಕ ಸ್ವಂತ ಪರಿಶ್ರಮದಿಂದ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ತಾವು ತಯಾರಿಸಿದ ಪುಟ್ಟ ತೊಟ್ಟಿಲನ್ನು ಮುಖ್ಯಮಂತ್ರಿಗಳಿಗೆ ಉಡುಗೊರೆಯಾಗಿ ನೀಡಿದಾಗ, ಆ ಮಹಿಳೆಯ ಮುಖದಲ್ಲಿದ್ದ ಸಂತೋಷ ಮತ್ತು ಸಾಧನೆಯ ಹೆಮ್ಮೆ ಎಲ್ಲರ ಮನಮುಟ್ಟುವಂತಿತ್ತು. ಮಹಿಳೆಯರ ಬದುಕಿನಲ್ಲಿ ಆತ್ಮವಿಶ್ವಾಸ ಮೂಡಿಸಿ, ಅವರ ಕನಸುಗಳಿಗೆ ರೆಕ್ಕೆ ನೀಡಿ, ತಮ್ಮದೇ ಪರಿಶ್ರಮದಿಂದ ಬದುಕು ಕಟ್ಟಿಕೊಳ್ಳುವ ಶಕ್ತಿ ತುಂಬುತ್ತಿರುವ ಗೃಹಲಕ್ಷ್ಮಿ ಯೋಜನೆಯ ಆಶಯ ಇಂತಹ ಅನುಭವಗಳಲ್ಲಿ ಸಾಕಾರಗೊಳ್ಳುತ್ತಿದೆ. ಯೋಜನೆಯ ನೆರವು ಮಹಿಳೆಯೊಬ್ಬರ ಕೈ ಸೇರಿ, ಆಕೆಯ ಪ್ರತಿಭೆಗೆ ಅಭಿವ್ಯಕ್ತಿಯ ಅವಕಾಶವಾಗಿ, ಆರ್ಥಿಕ ಸ್ವಾವಲಂಬನೆಯ ಹಾದಿಯಲ್ಲಿ ಮುನ್ನಡೆಯಲು ಪ್ರೇರಣೆಯಾಗುವುದು ಸರ್ಕಾರದ ಪಾಲಿಗೆ ಅತ್ಯಂತ ದೊಡ್ಡ ಸಾರ್ಥಕತೆ.
5
2,938
ನಿಸರ್ಗದ ಮಡಿಲಲ್ಲಿ ಧುಮ್ಮಿಕ್ಕುವ ಜಲಸಿರಿಯೇ ಕರುನಾಡಿನ ಹೆಮ್ಮೆ! 540ಕ್ಕೂ ಹೆಚ್ಚು ಜಲಪಾತಗಳಿಂದ ನಳನಳಿಸುತ್ತಿರುವ ನಮ್ಮ ಕರ್ನಾಟಕವು ಪ್ರಾಕೃತಿಕ ಸಂಪತ್ತಿನ ಬೀಡು. ವಿಶ್ವವಿಖ್ಯಾತ ಜೋಗ, ಗಗನಚುಕ್ಕಿ-ಭರಚುಕ್ಕಿ ಸೇರಿದಂತೆ ಪಶ್ಚಿಮ ಘಟ್ಟಗಳ ನೂರಾರು ಜಲಧಾರೆಗಳು ನಮ್ಮ ರಾಜ್ಯದ ನಯನಮನೋಹರ ಸೊಬಗಿಗೆ ಸಾಕ್ಷಿ.
20
3,042
"ಪ್ರತಿಯೊಬ್ಬರ ಜೀವನದ ಅನುಭವಗಳು ದಾಖಲೆಯಾಗಬೇಕು" ಸನ್ಮಾನ್ಯ ಮುಖ್ಯಮಂತ್ರಿಗಳಾದ @DKShivakumar ಅವರು ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿಯ ನಾಲ್ವಡಿ ಕೃಷ್ಣರಾಜ ಒಡೆಯರ್‌ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಡಾ. ರಮ್ಯಾ ವೈ.ಎನ್. ಅವರು ತಮ್ಮ ಜೀವನ ಆಧರಿಸಿ ರಚಿಸಿರುವ ʻಚಲಿಸುವ ಬಂಡೆʼ ಕೃತಿಯನ್ನು ಲೋಕಾರ್ಪಣೆಗೊಳಿಸಿ ಶುಭ ಹಾರೈಸಿದರು. ಬಳಿಕ ನೆರೆದಿದ್ದವರನ್ನು ಉದ್ದೇಶಿಸಿ ಮಾತನಾಡಿದರು. ಪ್ರತಿಯೊಬ್ಬರ ಜೀವನದ ಅನುಭವಗಳು ದಾಖಲೆಯಾಗಬೇಕು. ಸಾಹಿತ್ಯ ಉಳಿಯಬೇಕಾದರೆ ಪುಸ್ತಕಗಳನ್ನು ಬರೆಯುವವರನ್ನು ನಾವು ಪ್ರೋತ್ಸಾಹಿಸಬೇಕು. ಅದೃಷ್ಟದ ಮೇಲೆ ಎಂದಿಗೂ ನಂಬಿಕೆ ಇಡಬೇಡಿ, ನಿಮ್ಮ ಪರಿಶ್ರಮದ ಮೇಲೆ ನಂಬಿಕೆ ಇಡಿ. ಇಂದು ನಾವು ಈ ಸ್ಥಾನಕ್ಕೆ ತಲುಪಲು ಅಪಾರ ಶ್ರಮಪಟ್ಟಿದ್ದೇವೆ. ಆರೋಗ್ಯ, ಕುಟುಂಬ ಹಾಗೂ ವೈಯಕ್ತಿಕ ಜೀವನವನ್ನೂ ಲೆಕ್ಕಿಸದೆ ಸಾಕಷ್ಟು ತ್ಯಾಗ ಮಾಡಿದ್ದೇವೆ. ನನ್ನ ಅಧಿಕಾರಾವಧಿಯಲ್ಲಿ ಅಭಿವೃದ್ಧಿ ಮಾಡಬೇಕು, ಸಾಕ್ಷಿಗುಡ್ಡೆಗಳನ್ನು ಬಿಟ್ಟು ಹೋಗಬೇಕು ಎಂಬುದೇ ನನ್ನ ಉದ್ದೇಶವಾಗಿದೆ. ಈ ಸಂದರ್ಭದಲ್ಲಿ ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮಿಗಳು, ಸಚಿವರಾದ ಶ್ರೀ ಪಿ.ಎಂ. ನರೇಂದ್ರಸ್ವಾಮಿ, ಕರ್ನಾಟಕ ವಿಧಾನ ಪರಿಷತ್ತಿನ ಉಪಸಭಾಪತಿಗಳಾದ ಶ್ರೀಮತಿ ಉಮಾಶ್ರೀ, ಶಾಸಕರಾದ ಶ್ರೀ ತನ್ವೀರ್ ಸೇಠ್, ಶ್ರೀ ಎ.ಆರ್. ಕೃಷ್ಣಮೂರ್ತಿ, ಶ್ರೀ ಜಿ.ಟಿ. ದೇವೇಗೌಡ, ಸಂಸದರಾದ ಶ್ರೀ ಸುನೀಲ್ ಬೋಸ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಶ್ರೀ ಹೆಚ್.ಎಂ. ರೇವಣ್ಣ, ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಲೋಕನಾಥ್ ಎನ್.ಕೆ. ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
4
39
4,076
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೂಲಕ ಹಾದುಹೋಗುವ ಕಟಪಾಡಿ–ಅಬ್ಬಕ್ಕ ವೃತ್ತ (ರಾಜ್ಯ ಹೆದ್ದಾರಿ-300) ರಸ್ತೆಯಲ್ಲಿ ಭಾರಿ ಹೊಂಡ-ಗುಂಡಿಗಳು ಬಿದ್ದು ವಾಹನ ಸವಾರರು ಪರದಾಡುತ್ತಿರುವ ಕುರಿತು ದಿನಪತ್ರಿಕೆಯಲ್ಲಿ ಪ್ರಕಟವಾದ ವರದಿಯನ್ನು ಮುಖ್ಯಮಂತ್ರಿಗಳ ಸಚಿವಾಲಯ ಅತ್ಯಂತ ಗಂಭೀರವಾಗಿ ಪರಿಗಣಿಸಿತ್ತು. ಸಿಎಂ ಸಚಿವಾಲಯದ ನಿರ್ದೇಶನದ ಮೇರೆಗೆ ಕಾರ್ಯಪ್ರವೃತ್ತರಾದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ತ್ವರಿತ ಕ್ರಮ ಕೈಗೊಂಡಿದ್ದಾರೆ. ಮಳೆಗಾಲದ ಹಿನ್ನೆಲೆಯಲ್ಲಿ ಈ ಹಿಂದೆ ತಾತ್ಕಾಲಿಕವಾಗಿ ಮುಚ್ಚಲಾಗಿದ್ದ ರಸ್ತೆಯ ಗುಂಡಿಗಳನ್ನು ಇದೀಗ ಡಾಂಬರ್ ಪ್ಯಾಚ್ ಕಾಮಗಾರಿಯ ಮೂಲಕ ವ್ಯವಸ್ಥಿತವಾಗಿ ಮುಚ್ಚಲಾಗಿದ್ದು, ಬಂಟ್ವಾಳ ಪೇಟೆಗೆ ಸಂಪರ್ಕಿಸುವ ಭಾಗ ಸೇರಿದಂತೆ ಸಂಪೂರ್ಣ ರಸ್ತೆಯನ್ನು ವಾಹನ ಸಂಚಾರಕ್ಕೆ ಯೋಗ್ಯಗೊಳಿಸಲಾಗಿದೆ. ಅತಿಯಾದ ಭಾರ ಹೊತ್ತ ಲಾರಿಗಳ ನಿರಂತರ ಓಡಾಟದಿಂದ ಹಾನಿಗೊಳಗಾಗುತ್ತಿರುವ ಈ ರಸ್ತೆಯ ಸಂಚಾರ ನಿಯಂತ್ರಣಕ್ಕೆ ಆರ್‌ಟಿಒ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ಬಂಟ್ವಾಳ ಕ್ಷೇತ್ರಕ್ಕೆ ಒಟ್ಟು ₹12 ಕೋಟಿ ಅನುದಾನದ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. #CMSolves
1
2
9
3,874
ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರು ಮೈಸೂರಿನ ಮಾನಸಗಂಗೋತ್ರಿಯಲ್ಲಿಂದು ರಾಷ್ಟ್ರಕವಿ ಕುವೆಂಪು ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗಳಿಗೆ ಪುಷ್ಪಾರ್ಚನೆ ಸಲ್ಲಿಸಿ, ಗೌರವ ನಮನಗಳನ್ನು ಅರ್ಪಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಹರೀಶ್ ಗೌಡ, ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಲೋಕನಾಥ್ ಎನ್.ಕೆ. ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
5
40
4,040
ಇಂದು ಮೈಸೂರಿನ ಕಾವೇರಿ ಎಂಪೋರಿಯಂನಲ್ಲಿ ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ವತಿಯಿಂದ ಆಯೋಜಿಸಿದ್ದ ನಮ್ಮ ನಾಡಿನ ಹೆಮ್ಮೆಯ ಕಲೆಯಾದ ‘ಕರ್ನಾಟಕ ಕಂಚಿನ ವಸ್ತುಗಳ’ (Karnataka Bronze Ware) ಪ್ರದರ್ಶನಕ್ಕೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರು ಭೇಟಿ ನೀಡಿ, ಕಲಾವಿದರ ಅದ್ಭುತ ಕೈಚಳಕದಿಂದ ಮೂಡಿಬಂದ ಕಲಾಕೃತಿಗಳ ಸೌಂದರ್ಯವನ್ನು ವೀಕ್ಷಿಸಿದರು. ಈ ವೇಳೆ ನಮ್ಮ ಸಾಂಪ್ರದಾಯಿಕ ಕಲೆ, ಸಂಸ್ಕೃತಿ ಮತ್ತು ಕರಕುಶಲ ಪರಂಪರೆಯನ್ನು ಸಂರಕ್ಷಿಸಿ, ಪ್ರೋತ್ಸಾಹಿಸುವುದರ ಜೊತೆಗೆ ಅವುಗಳ ಮಹತ್ವವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
3
1
49
4,750
ನಮ್ಮ ಮೆಟ್ರೋಗೆ ಕರ್ನಾಟಕದ ಕೊಡುಗೆ ಕೇವಲ ನಿರ್ಮಾಣ ಕಾರ್ಯಕ್ಕೆ ಮಾತ್ರ ಸೀಮಿತವಾಗಿಲ್ಲ. ಭೂಸ್ವಾಧೀನದಿಂದ ಹಿಡಿದು ದೈನಂದಿನ ಕಾರ್ಯಾಚರಣೆ, ಸಾಲ ಮರುಪಾವತಿ ಹಾಗೂ ಆರ್ಥಿಕ ನೆರವಿನವರೆಗೂ ಪ್ರತಿಯೊಂದು ಹಂತದಲ್ಲೂ ರಾಜ್ಯದ ಪಾಲು ಬಹುದೊಡ್ಡದು. ಬೆಂಗಳೂರಿನ ಮೆಟ್ರೋ ಜಾಲವನ್ನು ಕಟ್ಟಿ, ಯಶಸ್ವಿಯಾಗಿ ಮುನ್ನಡೆಸುವ ಹೊಣೆಗಾರಿಕೆಯನ್ನು ನಾವು ನಿರಂತರವಾಗಿ ನಿಭಾಯಿಸುತ್ತಿದ್ದೇವೆ. Karnataka’s contribution to Namma Metro goes far beyond construction. From land acquisition and operations to loan repayment and financial support, we continue to shoulder the responsibility of building and sustaining Bengaluru’s Metro network. #ಇದುನಮ್ಮಮೆಟ್ರೋ #IdhuNammaMetro
5
27
1
252
19,699
2027ರಲ್ಲಿ ಮೂರು ದಿನಗಳ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಸಾಹಿತಿ ವೀರಪ್ಪ ಮೊಯಿಲಿ ಅವರ ನೇತೃತ್ವದಲ್ಲಿ 2027ರಲ್ಲಿ ಮೂರು ದಿನಗಳ ಕಾಲ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗುವುದು. ಈ ಕುರಿತು ಮುಂದಿನ ಬಜೆಟ್‌ನಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ವಿದೇಶಗಳಲ್ಲಿಯೂ ಕನ್ನಡಕ್ಕೆ ಅಪಾರ ಗೌರವ ನೀಡುತ್ತಿರುವ ಕನ್ನಡಿಗರನ್ನು ಒಂದೆಡೆ ಸೇರಿಸಿ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸುವ ಉದ್ದೇಶವಿದೆ. ಜಗತ್ತು ಒಂದಾಗಬೇಕಾದರೆ ಮೊದಲು ಮನುಷ್ಯರು ಒಂದಾಗಬೇಕು. ಮನುಷ್ಯನನ್ನು ನಿಜವಾದ ಮನುಷ್ಯನನ್ನಾಗಿ ರೂಪಿಸುವುದೇ ಧರ್ಮ ಮತ್ತು ಸಂಸ್ಕೃತಿ. ರಾಜಕೀಯದಲ್ಲಿರುವ ನಮ್ಮ ಹೆಸರುಗಳು ಭವಿಷ್ಯದಲ್ಲಿ ಮರೆಯಾಗಬಹುದು. ಆದರೆ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರ ಹೆಸರು ಮತ್ತು ಅವರ ಚಿಂತನೆಗಳು ಶಾಶ್ವತವಾಗಿ ಉಳಿಯುತ್ತವೆ. ಶಿಕ್ಷಣ ಮತ್ತು ಸಾಹಿತ್ಯ ಜಗತ್ತಿನ ಅತ್ಯಂತ ಶಕ್ತಿಶಾಲಿ ಸಾಧನಗಳಾಗಿವೆ. ಸಾಹಿತ್ಯ ಮತ್ತು ರಾಜಕಾರಣದ ನಂಟು ಹೊಸದೇನಲ್ಲ. ಅಧಿಕಾರವನ್ನು ಬಳಸಿಕೊಂಡು ಜನರ ಬದುಕಿನಲ್ಲಿ ಬದಲಾವಣೆ ತರಬಹುದು. ಆದರೆ ಸಾಹಿತ್ಯದ ಮೂಲಕ ಜನರ ಆಲೋಚನೆಗಳನ್ನೇ ಬದಲಾಯಿಸಬಹುದು. ಅಧಿಕಾರದ ಅವಧಿ ಸೀಮಿತವಾದರೂ ಸಾಹಿತ್ಯದ ಪ್ರಭಾವ ಶಾಶ್ವತ. ಒಬ್ಬ ವ್ಯಕ್ತಿಯ ಬದುಕು ಮುಗಿದರೂ ಆತ ಬರೆದ ಚಿಂತನೆಗಳಿಗೆ ಸಾವಿಲ್ಲ. ವೀರಪ್ಪ ಮೊಯಿಲಿ ಅವರು ನಾಲ್ಕನೇ ತರಗತಿಯಲ್ಲಿದ್ದಾಗಲೇ ಕವಿತೆ ಬರೆಯುವ ಮೂಲಕ ಸಾಹಿತ್ಯದ ಒಲವು ಬೆಳೆಸಿಕೊಂಡವರು. ರಾಜಕೀಯ ಮತ್ತು ಸಾಹಿತ್ಯ ಎರಡನ್ನೂ ಸಮರ್ಥವಾಗಿ ನಿಭಾಯಿಸುತ್ತಿರುವ ಅವರ ಸಾಧನೆ ವಿಶೇಷವಾದದ್ದು. ದಕ್ಷಿಣ ಕನ್ನಡ ಜಿಲ್ಲೆಯ ಹಳ್ಳಿಯಿಂದ ಬಂದು ರಾಜ್ಯದ ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ ಅವರು, ರಾಜಕೀಯದ ಜೊತೆಗೆ ಸಾಹಿತ್ಯ ಕ್ಷೇತ್ರದಲ್ಲಿಯೂ ಮಹತ್ವದ ಸಾಧನೆ ಮಾಡಿದ್ದಾರೆ. ಮೊಯಿಲಿ ಅವರು 30ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದು, ಅವರ 'ರಾಮಾಯಣ ಮಹಾನ್ವೇಷಣಂ' ಕೃತಿಗೆ ಸರಸ್ವತಿ ಸಮ್ಮಾನ್ ಪ್ರಶಸ್ತಿ ಲಭಿಸಿದೆ. ಕರ್ನಾಟಕದ ಸ್ವಾತಂತ್ರ್ಯ ಹೋರಾಟದ ಇತಿಹಾಸ ಕುರಿತಂತೆ ಅವರು ಬರೆದಿರುವ ಭಾಗವನ್ನು ಪ್ರತ್ಯೇಕ ಪುಸ್ತಕವಾಗಿ ಪ್ರಕಟಿಸುವಂತೆ ಮನವಿ ಮಾಡಿದ್ದೇನೆ. ಇದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅವರಿಗೆ ಜ್ಞಾನಪೀಠ ಸೇರಿದಂತೆ ಇನ್ನಷ್ಟು ಪ್ರತಿಷ್ಠಿತ ಸಾಹಿತ್ಯ ಪ್ರಶಸ್ತಿಗಳು ಲಭಿಸಲಿ ಎಂಬುದು ನಮ್ಮೆಲ್ಲರ ಆಶಯವಾಗಿದೆ. ರಾಜಕಾರಣಿಗಳಿಗೆ ಸಾರ್ವಜನಿಕ ಕೆಲಸಗಳ ಒತ್ತಡದ ನಡುವೆ ಸಾಹಿತ್ಯ ಮತ್ತು ಸಂಸ್ಕೃತಿಗಾಗಿ ಸಮಯ ಮೀಸಲಿಡುವುದು ಸುಲಭವಲ್ಲ. ಆದರೆ ಮೊಯಿಲಿ ಅವರು ರಾಜಕೀಯ ಜೀವನದ ನಡುವೆಯೂ ಸಾಹಿತ್ಯ ಕ್ಷೇತ್ರದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವುದು ಎಲ್ಲರಿಗೂ ಮಾದರಿಯಾಗಿದೆ. ರಾಜಕಾರಣಿಗಳಾದ ಎಂ.ಪಿ. ಪ್ರಕಾಶ್, ಬಂಗಾರಪ್ಪ, ಎಸ್ ಎಂ ಕೃಷ್ಣ ಸೇರಿದಂತೆ ಅನೇಕ ಹಿರಿಯ ನಾಯಕರು ಕೂಡ ಸಾಹಿತ್ಯ ಪ್ರೇಮಿಗಳಾಗಿದ್ದರು. ಕತ್ತಿಗಿಂತ ಲೇಖನಿ ಹರಿತ ಎಂಬ ಮಾತಿನಂತೆ ಸಾಹಿತ್ಯಕ್ಕೆ ಸಮಾಜವನ್ನು ಬದಲಿಸುವ ಶಕ್ತಿಯಿದೆ. ಸುತ್ತೂರು ಶ್ರೀಗಳು ನೂರಾರು ಬರಹಗಾರರನ್ನು ಪ್ರೋತ್ಸಾಹಿಸಿ, ಅನೇಕ ಪುಸ್ತಕಗಳ ರಚನೆಗೆ ಪ್ರೇರಣೆ ನೀಡಿದ್ದಾರೆ. ಸಾಹಿತ್ಯ, ಆಧ್ಯಾತ್ಮಿಕ ಚಿಂತನೆ ಮತ್ತು ಸಂಸ್ಕೃತಿಯ ಸಂರಕ್ಷಣೆಗೆ ಹಿರಿಯರು ನೀಡುತ್ತಿರುವ ಕೊಡುಗೆ ಅಪಾರ. — ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರು ಇಂದು ಮೈಸೂರಿನಲ್ಲಿ, ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯಿಲಿಯವರ 'ವಿಶ್ವಸಂಸ್ಕೃತಿಯ ಮಹಾಯಾನ' (ಸಂಪುಟ 4)- ಗದ್ಯ ಮಹಾಕಾವ್ಯವನ್ನು ಲೋಕಾರ್ಪಣೆ ಮಾಡಿ, ಮಾತನಾಡಿದ ಪ್ರಮುಖ ಅಂಶಗಳು.
8
56
6,027
ಸನ್ಮಾನ್ಯ ಮುಖ್ಯಮಂತ್ರಿ ಶ್ರೀ @DKShivakumar ಅವರು ಮಾಜಿ ಮುಖ್ಯಮಂತ್ರಿ, ಸರಸ್ವತಿ ಸಮ್ಮಾನ್‌ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಎಂ. ವೀರಪ್ಪ ಮೊಯಿಲಿಯವರ 'ವಿಶ್ವಸಂಸ್ಕೃತಿಯ ಮಹಾಯಾನ' (ಸಂಪುಟ 4) - ಗದ್ಯ ಮಹಾಕಾವ್ಯವನ್ನು ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಂದು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಮಾಜಿ ಮುಖ್ಯಮಂತ್ರಿಗಳಾದ ಡಾ. ಎಂ. ವೀರಪ್ಪ ಮೊಯಿಲಿ, ನಿಕಟಪೂರ್ವ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ, ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶ್ರೀ ಎಚ್.ಎಂ. ರೇವಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶ್ರೀ ಎ.ಎಸ್.‌ ಪೊನ್ನಣ್ಣ, ಶಾಸಕರು, ಜನಪ್ರತಿನಿಧಿಗಳು ಹಾಗೂ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
2
3
33
4,003
ಬೆಂಗಳೂರು ಮೆಟ್ರೋ ಯೋಜನೆಯ ಸಮಗ್ರ ಅಭಿವೃದ್ಧಿಯಲ್ಲಿ ಕರ್ನಾಟಕ ಸರ್ಕಾರವೇ ಅತಿ ಹೆಚ್ಚಿನ ಆರ್ಥಿಕ ಕೊಡುಗೆ ನೀಡುತ್ತಿದೆ. ಮೆಟ್ರೋ ಮಾರ್ಗಗಳ ನಿರ್ಮಾಣಕ್ಕೆ ಹಣಕಾಸು ಒದಗಿಸುವುದರ ಜತೆಗೆ, ಭೂಸ್ವಾಧೀನ, ಪುನರ್ವಸತಿ, ರಾಜ್ಯ ತೆರಿಗೆ, ನಿರ್ಮಾಣದ ಅವಧಿಯ ಬಡ್ಡಿ, ಸಾಲ ಮರುಪಾವತಿ ಹಾಗೂ ಮೆಟ್ರೋ ರೈಲುಗಳ ನಿರ್ವಹಣೆಯ ಜವಾಬ್ದಾರಿಯನ್ನೂ ರಾಜ್ಯ ಸರ್ಕಾರ ನಿಭಾಯಿಸುತ್ತಿದೆ. ಮೆಟ್ರೋ ಯೋಜನೆಯ ವಿವಿಧ ಹಂತಗಳಲ್ಲಿ ಕೇಂದ್ರ ಸರ್ಕಾರಕ್ಕಿಂತ ಹೆಚ್ಚಿನ ಹಣವನ್ನು ಕರ್ನಾಟಕ ಸರ್ಕಾರವೇ ಹೂಡಿಕೆ ಮಾಡಿದೆ. ಕಾಮಗಾರಿಗಳ ವಿಳಂಬದಿಂದ ಉಂಟಾಗುವ ಹೆಚ್ಚುವರಿ ವೆಚ್ಚದ ಹೊರೆಯಲ್ಲಿಯೂ ರಾಜ್ಯದ ಪಾಲು ಗಣನೀಯವಾಗಿದೆ. ಇದರೊಂದಿಗೆ, ಹೊಸ ಮೆಟ್ರೋ ಮಾರ್ಗಗಳ ನಿರ್ಮಾಣ ಮತ್ತು ಜಾಲದ ವಿಸ್ತರಣೆಗೆ ರಾಜ್ಯ ಸರ್ಕಾರ ನಿರಂತರವಾಗಿ ಅನುದಾನ ಹಾಗೂ ಅಗತ್ಯ ನೆರವು ಒದಗಿಸುತ್ತಿದೆ. ಒಟ್ಟಾರೆ ಮೆಟ್ರೋ ಯೋಜನೆಯ ವೆಚ್ಚ, ನಿರ್ಮಾಣದ ನಂತರದ ನಿರ್ವಹಣೆ ಮತ್ತು ಭವಿಷ್ಯದ ವಿಸ್ತರಣೆ ಎಲ್ಲದರಲ್ಲೂ ಕರ್ನಾಟಕ ಸರ್ಕಾರದ ಪಾಲುದಾರಿಕೆ ಪ್ರಮುಖವಾಗಿದೆ. ಬೆಂಗಳೂರಿನ ಬೆಳವಣಿಗೆಗೆ ಪೂರಕವಾದ ಸಮಗ್ರ, ಸುಸ್ಥಿರ ಮತ್ತು ಸುಗಮ ಸಾರ್ವಜನಿಕ ಸಾರಿಗೆ ವ್ಯವಸ್ಥೆ ರೂಪಿಸುವುದು ರಾಜ್ಯ ಸರ್ಕಾರದ ಆದ್ಯತೆಯಾಗಿದೆ. #ಇದುನಮ್ಮಮೆಟ್ರೋ
52
65
8
441
29,087
The Government of Karnataka is playing the leading role in financing the development and expansion of Namma Metro, contributing more than the Union Government across various phases of the project. Beyond funding construction, we are shouldering the costs of land acquisition, rehabilitation, state taxes, interest during construction, loan repayment and the operation and maintenance of metro services. We are also bearing a significant share of the additional costs arising from project delays while continuing to support new metro lines and network expansion. Strengthening Bengaluru’s public transport infrastructure through an integrated, sustainable and efficient metro network remains one of our key priorities. #IdhuNammaMetro
1
2
16
1,781
ಸ್ವತಂತ್ರ ಭಾರತದ ಮೊದಲ ಶಿಕ್ಷಣ ಸಚಿವರಾಗಿ ದೇಶದ ಶಿಕ್ಷಣ ವ್ಯವಸ್ಥೆಯ ಬಲವರ್ಧನೆಗೆ ಭದ್ರ ಬುನಾದಿ ಹಾಕಿದ, ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಶಿಕ್ಷಣ ತಜ್ಞ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮದಿನದಂದು ಗೌರವಪೂರ್ವಕ ನಮನಗಳು. ಶಿಕ್ಷಣವು ಪ್ರತಿಯೊಬ್ಬರ ಹಕ್ಕು ಎಂಬ ಆಶಯವನ್ನು ಬಲವಾಗಿ ಪ್ರತಿಪಾದಿಸಿದ ಅವರ ಚಿಂತನೆಗಳು, ಸಮಾನ ಅವಕಾಶಗಳ ಸಮಾಜ ನಿರ್ಮಾಣಕ್ಕೆ ಇಂದಿಗೂ ದಾರಿದೀಪ. ಗುಣಮಟ್ಟದ ಶಿಕ್ಷಣ ಎಲ್ಲರಿಗೂ ತಲುಪುವಂತೆ ಮಾಡುವ ಸಂಕಲ್ಪದೊಂದಿಗೆ ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸೋಣ.
5
53
1
406
6,024
ಚಿತ್ರದುರ್ಗದ ಕೋಟೆಯನ್ನು ರಕ್ಷಿಸಲು ಅಪ್ರತಿಮ ಧೈರ್ಯ, ಸಾಹಸ ಮತ್ತು ನಾಡಪ್ರೇಮ ಮೆರೆದ ವೀರವನಿತೆ ಒನಕೆ ಓಬವ್ವ ಅವರ ಜಯಂತಿಯಂದು ಗೌರವಪೂರ್ವಕ ನಮನಗಳು. ಅವರ ಶೌರ್ಯಗಾಥೆ ಮಹಿಳಾ ಶಕ್ತಿಗೆ ಪ್ರೇರಣೆ. ಅನ್ಯಾಯದ ವಿರುದ್ಧ ಸೆಟೆದು ನಿಲ್ಲುವ ಛಲ, ನಾಡಿನ ರಕ್ಷಣೆಗೆ ತೋರಿದ ಸಾಹಸ ಎಲ್ಲ ಮಹಿಳೆಯರಿಗೂ ಸದಾ ಸ್ಫೂರ್ತಿ.
5
16
63
4,059
ಕನ್ನಡ ಸಾಹಿತ್ಯಕ್ಕೆ ಜ್ಞಾನಪೀಠದ ಗೌರವ ತಂದುಕೊಟ್ಟ ರಾಷ್ಟ್ರಕವಿ ಕುವೆಂಪು ಅವರು ತಮ್ಮ ಸಾಹಿತ್ಯ, ಚಿಂತನೆ ಮತ್ತು ಮಾನವೀಯ ಮೌಲ್ಯಗಳ ಮೂಲಕ ನಾಡಿನ ಸಾಂಸ್ಕೃತಿಕ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. "ವಿಶ್ವಮಾನವ" ಪರಿಕಲ್ಪನೆಯ ಮೂಲಕ ಜಾತಿ, ಧರ್ಮ ಮತ್ತು ಪ್ರಾದೇಶಿಕತೆಯ ಸಂಕುಚಿತ ಎಲ್ಲೆಗಳನ್ನು ಮೀರಿ ಮನುಷ್ಯತ್ವವೇ ಶ್ರೇಷ್ಠ ಎಂಬ ಸಂದೇಶವನ್ನು ಸಾರಿದ ಅವರ ವಿಚಾರಧಾರೆ ಇಂದಿಗೂ ಪ್ರಸ್ತುತ.
2
6
36
3,382
ಬೆಂಗಳೂರಿನ ನಾಗರಿಕರಿಗೆ ಆಸ್ತಿ ಸಂಬಂಧಿತ ಸೇವೆಗಳನ್ನು ಮತ್ತಷ್ಟು ಸುಲಭಗೊಳಿಸುವ ಉದ್ದೇಶದಿಂದ ಬಿಡಿಎ ಮೂಲಕ ಹಲವು ಸುಧಾರಣಾ ಕ್ರಮಗಳನ್ನು ಜಾರಿಗೆ ತರಲಾಗಿದೆ. ಅರ್ಹ ಮನೆಗಳ ಮರುಮಂಜೂರಾತಿ, ಭೂಮಿ ನೀಡಿದವರಿಗೆ ನಿವೇಶನ ಹಂಚಿಕೆ, ನಿವೇಶನದ ಅಂಚಿನ ಜಾಗದ ಹಂಚಿಕೆ ಹಾಗೂ ಶುದ್ಧ ಕ್ರಯಪತ್ರ ನೋಂದಣಿಗೆ ವಿಶೇಷ ಮೇಳದಂತಹ ಕ್ರಮಗಳು ಆಸ್ತಿ ಮಾಲೀಕರಿಗೆ ಅನುಕೂಲವಾಗಲಿವೆ. ನಾಗರಿಕರ ಬಹುದಿನಗಳ ನಿರೀಕ್ಷೆಗಳಿಗೆ ಸ್ಪಂದಿಸಿ, ಆಸ್ತಿ ಸಂಬಂಧಿತ ಪ್ರಕ್ರಿಯೆಗಳನ್ನು ಸರಳಗೊಳಿಸುವ ನಿಟ್ಟಿನಲ್ಲಿ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ.
3
7
44
6,960
ಬೆಂಗಳೂರಿನ ನಾಗರಿಕರಿಗೆ ಆಸ್ತಿ ಸಂಬಂಧಿತ ಸೇವೆಗಳನ್ನು ಮತ್ತಷ್ಟು ಸುಲಭಗೊಳಿಸುವ ಉದ್ದೇಶದಿಂದ ಬಿಡಿಎ ಮೂಲಕ ಹಲವು ಸುಧಾರಣಾ ಕ್ರಮಗಳನ್ನು ಜಾರಿಗೆ ತರಲಾಗಿದೆ. ಅರ್ಹ ಮನೆಗಳ ಮರುಮಂಜೂರಾತಿ, ಭೂಮಿ ನೀಡಿದವರಿಗೆ ನಿವೇಶನ ಹಂಚಿಕೆ, ನಿವೇಶನದ ಅಂಚಿನ ಜಾಗದ ಹಂಚಿಕೆ ಹಾಗೂ ಶುದ್ಧ ಕ್ರಯಪತ್ರ ನೋಂದಣಿಗೆ ವಿಶೇಷ ಮೇಳದಂತಹ ಕ್ರಮಗಳು ಆಸ್ತಿ ಮಾಲೀಕರಿಗೆ ಅನುಕೂಲವಾಗಲಿವೆ. ನಾಗರಿಕರ ಬಹುದಿನಗಳ ನಿರೀಕ್ಷೆಗಳಿಗೆ ಸ್ಪಂದಿಸಿ, ಆಸ್ತಿ ಸಂಬಂಧಿತ ಪ್ರಕ್ರಿಯೆಗಳನ್ನು ಸರಳಗೊಳಿಸುವ ನಿಟ್ಟಿನಲ್ಲಿ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ.
1
1
3
656
ಬರ ಪರಿಹಾರದ ಬಗ್ಗೆ ಗೊಂದಲ ಬೇಡ; ಎಲ್ಲ ಅರ್ಹ ರೈತರಿಗೂ ₹5,000 ನೆರವು ರಾಜ್ಯದ ರೈತ ಬಾಂಧವರಲ್ಲಿ ಬರ ಪರಿಹಾರದ ಕುರಿತು ಯಾವುದೇ ಗೊಂದಲ ಬೇಡ. ಮೊದಲ ಕಂತಿನಲ್ಲಿ ಬಿಡುಗಡೆಯಾಗಿರುವ ಹಣವೇ ಅಂತಿಮವಲ್ಲ. SDRF/NDRF ನಿಯಮಗಳಡಿ ಮಳೆಯಾಶ್ರಿತ, ನೀರಾವರಿ ಹಾಗೂ ಬಹುವಾರ್ಷಿಕ ಬೆಳೆಗಳಿಗೆ ಕ್ರಮವಾಗಿ ₹1,500, ₹2,600 ಮತ್ತು ₹3,200 ಕನಿಷ್ಠ ಪರಿಹಾರ ನಿಗದಿಯಾಗಿದೆ. ಆದರೆ, ರಾಜ್ಯ ಸರ್ಕಾರ ಈ ಮೂರೂ ವರ್ಗದ ಬೆಳೆಗಳಿಗೂ ಕನಿಷ್ಠ ₹5,000 ಬರ ಪರಿಹಾರ ನೀಡಲಿದೆ. ಈ ಹೆಚ್ಚುವರಿ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ಮೊದಲ ಕಂತಿನಲ್ಲಿ ₹2,000 ಅಥವಾ ₹2,500 ಪಡೆದ ರೈತರಿಗೆ ಬಾಕಿ ಹಣ ಮುಂದಿನ ಕಂತಿನಲ್ಲಿ ಪಾವತಿಯಾಗಲಿದೆ. ಅರ್ಹ ರೈತರು ಬೆಳೆ ನಷ್ಟದ ಆಧಾರದ ಮೇಲೆ ₹60,000ವರೆಗೆ ಇನ್‌ಪುಟ್ ಸಬ್ಸಿಡಿ ನೆರವನ್ನು ಪಡೆಯಬಹುದು. ರೈತರಿಗೆ ಪೂರ್ಣ ಪರಿಹಾರ ತಲುಪಿಸಲು ಸರ್ಕಾರ ಬದ್ಧವಾಗಿದ್ದು, ತಪ್ಪು ಮಾಹಿತಿ, ವದಂತಿಗಳಿಗೆ ಕಿವಿಗೊಡಬೇಡಿ.
6
9
98
12,456
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಮಗೋಡು ಬಳಿ ರಾಣೆಬೆನ್ನೂರು-ಬೈಂದೂರು ರಾಷ್ಟ್ರೀಯ ಹೆದ್ದಾರಿ-766ಸಿ ರಸ್ತೆಯ ಕಡಿದಾದ ತಿರುವಿನಲ್ಲಿ ತಡೆಗೋಡೆ ಇಲ್ಲದೆ, ಕಣಿವೆಯ ಅಪಾಯ ತಪ್ಪಿಸಲು ಗ್ರಾಮಸ್ಥರೇ ಬೇಲಿಗೂಟ ನೆಟ್ಟಿರುವ ಕುರಿತು ದಿನಪತ್ರಿಕೆಯಲ್ಲಿ ಪ್ರಕಟವಾದ ವರದಿಯನ್ನು ಮುಖ್ಯಮಂತ್ರಿಗಳ ಸಚಿವಾಲಯ ಅತ್ಯಂತ ಗಂಭೀರವಾಗಿ ಪರಿಗಣಿಸಿತ್ತು. ಸಿಎಂ ಸಚಿವಾಲಯದ ನಿರ್ದೇಶನದ ಮೇರೆಗೆ ರಾಷ್ಟ್ರೀಯ ಹೆದ್ದಾರಿ ವಿಭಾಗದ ಎಂಜಿನಿಯರ್‌ಗಳು ಸ್ಥಳಕ್ಕೆ ಖುದ್ದು ಭೇಟಿ ನೀಡಿ ತಾಂತ್ರಿಕ ಪರಿಶೀಲನೆ ನಡೆಸಿದ್ದಾರೆ. ಚಕ್ರಾನದಿ ಕಣಿವೆಯ ಕಡಿದಾದ ಇಳಿಜಾರು ಇರುವುದರಿಂದ ರಸ್ತೆ ಸುರಕ್ಷತೆಯ ಹಿತದೃಷ್ಟಿಯಿಂದ ಕ್ರಾಶ್ ಬ್ಯಾರಿಯರ್ ನಿರ್ಮಾಣ ಅತ್ಯಗತ್ಯವೆಂದು ಗುರುತಿಸಲಾಗಿದೆ. ಈ ಭಾಗ ಸೇರಿದಂತೆ ಉಳಿದ 50 ಕಿ.ಮೀ.ಗೂ ಹೆಚ್ಚು ರಸ್ತೆ ಅಭಿವೃದ್ಧಿ ಹಾಗೂ ಸುರಕ್ಷತಾ ಕಾಮಗಾರಿಗಳಿಗೆ ಈಗಾಗಲೇ ಆಡಳಿತಾತ್ಮಕ ಅನುಮೋದನೆ ದೊರೆತಿದ್ದು, ಪ್ರಸ್ತುತ ಟೆಂಡರ್ ಪ್ರಕ್ರಿಯೆಯಲ್ಲಿದೆ. ಟೆಂಡರ್ ಪೂರ್ಣಗೊಂಡ ತಕ್ಷಣವೇ ಸಮಗೋಡು ತಿರುವಿನಲ್ಲಿ ಕ್ರಾಶ್ ಬ್ಯಾರಿಯರ್ ನಿರ್ಮಿಸಿ ವಾಹನ ಸವಾರರ ಜೀವ ರಕ್ಷಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ವರದಿ ಸಲ್ಲಿಸಿದೆ. #CMSolves
5
31
7,710
ನಾಡಿನ ಸಮಸ್ತ ಜನತೆಗೆ ಬಲಿಪಾಡ್ಯಮಿ ಹಬ್ಬದ ಶುಭಾಶಯಗಳು. ತ್ಯಾಗ, ದಾನ ಮತ್ತು ಔದಾರ್ಯದ ಪ್ರತೀಕವಾದ ಬಲಿ ಚಕ್ರವರ್ತಿಯ ಆಶೀರ್ವಾದ ಎಲ್ಲರ ಮೇಲಿರಲಿ. ಈ ದೀಪಾವಳಿಯ ಬೆಳಕು ನಾಡಿನ ಪ್ರತಿಯೊಬ್ಬರ ಬಾಳಿನಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿಯನ್ನು ಕರುಣಿಸಲಿ.
5
52
4,990
ಕರುನಾಡಿನ ಮಣ್ಣಿನ ಕಣಕಣದಲ್ಲೂ ನಮ್ಮ ಜನಪದರ ಜೀವಂತಿಕೆ ಅಡಗಿದೆ. ಯಕ್ಷಗಾನ, ಡೊಳ್ಳು ಕುಣಿತ ಹಾಗೂ ಕಂಸಾಳೆಯಂತಹ ವಿಶಿಷ್ಟ ದೇಸಿ ಕಲಾ ಪ್ರಕಾರಗಳು ನಮ್ಮ ಶ್ರೀಮಂತ ಪರಂಪರೆಯ ಐತಿಹಾಸಿಕ ಸಾಕ್ಷಿ. ಜನಪದ ಕಲೆಗಳೇ ಕರುನಾಡ ಸಂಸ್ಕೃತಿಯ ಉಸಿರು ಹಾಗೂ ಹಿರಿಮೆಯ ಪ್ರತೀಕ.
2
18
4,244